ಬೆಂಗಳೂರು: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಸೋಲು ಕಂಡಿದ್ದೇವೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಸೋಲನುಭವಿಸಿರುವುದಕ್ಕೆ ನಮಗೆ ನಿರಾಸೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮೂರೂ ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇತ್ತು. ಆದರೆ, ಅಲ್ಲಿಯೂ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.
ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ. ಬೊಮ್ಮಾಯಿ ಸುಪುತ್ರ ಸ್ಪರ್ಧೆ ಮಾಡಿದ್ದರು. ಸಾಕಷ್ಟು ಶ್ರಮ ವಹಿಸಿದ್ದೇವು. ಆದರೆ ಅಲ್ಲಿಯೂ ಆಶ್ಚರ್ಯ ಎನ್ನುವಂತೆ ಸೋತಿದ್ದೇವೆ. ಎರಡೂ ಪಕ್ಷಗಳ ನಾಯಕರು ಕುಳಿತು ಸೋಲಿನ ಕುರಿತು ಪರಾಮರ್ಶೆ ಮಾಡುತ್ತೇವೆ. ಲೋಪಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ, ಇದೇ ಮೊದಲ ಬಾರಿಗೆ ಸಂಡೂರಿನಲ್ಲಿ ನಮಗೆ 80 ಸಾವಿರಕ್ಕೂ ಅಧಿಕ ಮತಗಳು ಬಂದಿವೆ. ಸಂಡೂರು ಫಲಿತಾಂಶ ಹಿನ್ನಡೆ ಅಂತ ನಾವು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.








