ರಾಜ್ಯದಲ್ಲಿನ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ಗೆ ಮುಖಭಂಗವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತು ಯಡಿಯೂರಪ್ಪ ಅವರ ವಿರುದ್ಧ ಹರಿಹಾಯ್ದಿದ್ದಾರೆ.
ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದಾಗಿ ಬಿಜೆಪಿ ಸೋಲುವಂತಾಗಿದೆ. ಈ ಕುರಿತು ಹೈಕಮಾಂಡ್ ಗಂಭೀರ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಜನರು ವಿಜಯೇಂದ್ರನನ್ನು ನಾಯಕ ಎಂದು ಒಪ್ಪಿಕೊಂಡಿಲ್ಲ. ವಿಜಯೇಂದ್ರಗೆ ಸ್ವಾಭಿಮಾನ ಇದ್ದರೆ, ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಹರಿಹಾಯ್ದರು.
ಭರತ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಬೇಕು ಎಂದಿದ್ದಾರೆ.








