ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಜೋರು ಚರ್ಚೆ ನಡೆಯುತ್ತಿದ್ದು, ಈಗಿನಿಂದಲೇ ಚರ್ಚೆ ಶುರುವಾಗಿದೆ.
ಎರಡು ಬಾರಿ ರಾಜ್ಯದ ಸಿಎಂ ಆಗಿದ್ದ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಮುಂದಿನ ಸಿಎಂ ಯಾರಾಗ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.
ಈ ವೇಳೆ ಮಾತನಾಡಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ಮೈತ್ರಿಯ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಸಿದ ನಂತರ ತೀರ್ಮಾನಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದರ ಬಗ್ಗೆ ಯಾವುದೇ ವಿವಾದವಿಲ್ಲ. ಚುನಾವಣೆಯ ನಂತರ ಮೂರೂ ಪಕ್ಷಗಳ ನಾಯಕರು ಒಟ್ಟಾಗಿ ಕುಳಿತು ಈ ನಿರ್ಧಾರ ಕೈಗೊಳ್ಳಬೇಕು ಎಂದು ಮೊದಲೇ ನಿರ್ಧರಿಸಲಾಗಿದೆ. ಆದರೆ, ಬಿಜೆಪಿಗೆ ಹೆಚ್ಚು ಸ್ಥಾನ ಸಿಕ್ಕಿವೆ. ಅದರಲ್ಲೂ ಮ್ಯಾಜಿಕ್ ನಂಬರ್ ಗೆ ಸ್ವಲ್ಪವೇ ಸ್ವಲ್ಪ ಹಿಂದಿದೆ. ಹೀಗಾಗಿ ಬಿಜೆಪಿಯನ್ನು ಮಣಿಸುವ ಕೆಲಸಕ್ಕೆ ಇನ್ನುಳಿದ ಮೈತ್ರಿ ಪಕ್ಷಗಳು ಹೋಗುವುದಿಲ್ಲ. ಹೋದರೆ, ಹೋದ ವರ್ಷ ಶಿವಸೇನೆಗೆ ಆದ ಗತಿಯೇ ಆಗಬಹುದು. ಹೀಗಾಗಿ ಬಿಜೆಪಿ ಅಭ್ಯರ್ಥಿಯೇ ಸಿಎಂ ಆಗುವುದು ಖಚಿತ ಎನ್ನಲಾಗುತ್ತಿದೆ.








