ಕನ್ನಡಿಗ ಕೆಎಲ್ ರಾಹುಲ್ ಅವರು ಆರ್ ಸಿಬಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಮುಂದಿನ ಆವೃತ್ತಿಯಿಂದ ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ. ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದು, ಅವರು ಡೆಲ್ಲಿ ಪರ ಬ್ಯಾಟ್ ಬೀಸಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಾಹುಲ್ರನ್ನು ಅತ್ಯಂತ ಕಡಿಮೆ ಮೊತ್ತಕ್ಕೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಲಕ್ನೋ ತಂಡದ ಪರ ಕಣಕ್ಕಿಳಿಯಲು 17 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದ ರಾಹುಲ್, ಇದೀಗ ಡೆಲ್ಲಿ ಪರ 3 ಕೋಟಿ ನಷ್ಟದಲ್ಲಿ ಅಂದರೆ 14 ಕೋಟಿ ರೂ.ಗೆ ಆಡಲಿದ್ದಾರೆ.
ಕೆಎಲ್ ರಾಹುಲ್ ಐಪಿಎಲ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಆದರೆ 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ರಾಹುಲ್, ಒಮ್ಮೆಯೂ ತಂಡಕ್ಕೆ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಲಿಲ್ಲ. ಹೀಗಾಗಿ ಅವರನ್ನು ತಂಡ ಕೈ ಬಿಟ್ಟಿತು.
2013 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ರಾಹುಲ್, ಇಲ್ಲಿಯವರೆಗೆ ಐಪಿಎಲ್‌ನಲ್ಲಿ 132 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 4 ಶತಕ ಮತ್ತು 37 ಅರ್ಧ ಶತಕಗಳೊಂದಿಗೆ 4,683 ರನ್ ಗಳಿಸಿದ್ದಾರೆ. ರಾಹುಲ್ 6 ಸೀಸನ್‌ಗಳಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹಿಂದಿನ ಸೀಸನ್ ನಲ್ಲೂ ಅವರು 520 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು.
ಆರಂಭದಲ್ಲಿ ರಾಹುಲ್ರನ್ನು ಖರೀದಿಸಲು ಮುಂದಾಗಿದ್ದ ಆರ್ಸಿಬಿ, ಆನಂತರ ಹಿಂದೆ ಸರಿಯಿತು. ಹೀಗಾಗಿ ರಾಹುಲ್ ಡೆಲ್ಲಿ ಪಾಲಾದರು.








