ಚಿತ್ರದುರ್ಗ: ವಕ್ಫ್ (Waqf Board) ವಿರುದ್ಧ ರಾಜ್ಯದಲ್ಲಿ ಈಗಾಗಲೇ ಹೋರಾಟ ನಡೆಯುತ್ತಿದೆ. ಈ ಮಧ್ಯೆ ಭಾರತೀಯ ಕಿಸಾನ್ ಸಂಘ (Bharatiya Kisan Sangh) ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಕಿಸಾನ್ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರೈತರು, ಮಠಾಧೀಶರ ಭೂಮಿ ಕಬಳಿಸುತ್ತಿರುವ ವಕ್ಫ್ ವಿರುದ್ಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ರಾಜ್ಯ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ.
ವಕ್ಫ್ ಬೋರ್ಡ್, ರೈತರ ತಂಟೆಗೆ ಬಂದರೆ ನಾವು ಸುಮ್ಮನೆ ಕೂರುವುದಿಲ್ಲ. ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗಿದೆ.








