ಎರಡನೇ ದಿನದ ಭಾರತ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕುಟುಂಬ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪಗುಚ್ಛ ಅರ್ಪಿಸುವ ಮೂಲಕ ನಮನ ಸಲ್ಲಿಸಿದ್ದಾರೆ. ನಂತರ ವಿಸಿಟರ್ ಬುಕ್‌ನಲ್ಲಿ ತಮ್ಮ ಅಭಿಪ್ರಾಯವನ್ನು ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ದಾಖಲಿಸಿದ್ರು. ಬಳಿಕ ರಾಜ್‌ಘಾಟ್‌ನಲ್ಲಿ ಗಿಡ ನೆಡುವ ಮೂಲಕ ತಮ್ಮ ಭಾರತ ಪ್ರವಾಸದ ನೆನಪನ್ನು ಉಳಿಸಿದರು.
ನಿನ್ನೆ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಟ್ರಂಪ್, ಮೊದಲಿಗೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ರು. ನಂತರ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೊನೆಗೆ ಆಗ್ರಾದ ತಾಜ್ ಮಹಲ್ ಗೆ ಭೇಟಿ ಕೊಟ್ಟಿದ್ದರು. ನಿನ್ನೆ ಸಂಜೆ ದೆಹಲಿಗೆ ಬಂದಿರೋ ಟ್ರಂಪ್ ಇಂದು ರಾಜ್ ಘಾಟ್ ನಲ್ಲಿ ಗಾಂಧೀಜಿಗೆ ಪುಷ್ಪನಮನ ಸಲ್ಲಿಸುವ ಮೂಲಕ ತಮ್ಮ ಎರಡನೇ ದಿನದ ಪ್ರವಾಸ ಪ್ರಾರಂಭಿಸಿದ್ದಾರೆ.
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ
ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...








