ಚಂಡೀಗಢದ ಎರಡು ನೈಟ್ ಕ್ಲಬ್ ಗಳ ಹತ್ತಿರ ಅವಳಿ ಸ್ಫೋಟ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಫೋಟದಿಂದಾಗಿ ಹಲವಾರು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಕಚ್ಚಾ ಬಾಂಬ್‌ಗಳಿಂದ ಸ್ಫೋಟಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಮಂಗಳವಾರ ಬೆಳಗ್ಗೆ ಮೋಟಾರ್ ಸೈಕಲ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನೈಟ್ ಕ್ಲಬ್ ಗಳ ಮೇಲೆ ಕಡಿಮೆ ತೀವ್ರತೆಯ ಬಾಂಬ್ ಎಸೆದಿದ್ದಾರೆ ಎನ್ನಲಾಗಿದೆ.
ಈ ಕುರಿತು ಚಂಡೀಗಢ ಪೊಲೀಸರ ವಿಧಿವಿಜ್ಞಾನ ತಂಡಗಳು ತನಿಖೆ ನಡೆಸುತ್ತಿವೆ. ಬಾಂಬ್ ಅಥವಾ ಇನ್ನಾವುದೇ ಸ್ಫೋಟಕ ವಸ್ತುವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಧಿವಿಜ್ಞಾನ ತಜ್ಞರು ಮತ್ತು ಇತರ ತನಿಖಾ ಸಂಸ್ಥೆಗಳು ಸೇರಿದಂತೆ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.








