ವಿದ್ಯಾರ್ಥಿಗಳು ಓದುವ ನಶೆ ಬೆಳೆಸಿಕೊಳ್ಳಿ, ಮಾದಕ ವ್ಯಸನದ ನಶೆ ಬಿಡಲಿ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಮಾದಕ ವ್ಯಸನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಡ್ರಗ್ಸ್ ನಿಂದ ನಾವು ದೂರ ಇರಬೇಕು. ‘ಶಬ್ದವೇಧಿ’ ಸಿನಿಮಾದಲ್ಲಿ ಅಪ್ಪಾಜಿ ಅದ್ಬುತವಾಗಿ ಹೇಳಿದ್ದಾರೆ. ಹುಟ್ಟು ಅನ್ನೋದು ಒಂದು ಗಿಫ್ಟ್. ಅದನ್ನ ಕಾಪಾಡಿಕೊಳ್ಳಬೇಕು. ಹೀಗಾಗಿ ವಿದ್ಯಾರ್ಥಿಗಳು ದಶ್ಚಟಗಳಿಂದ ದೂರವಿದ್ದು, ಓದಿನ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.
ಯಾರು ಡ್ರಗ್ಸ್ ಸೇವಿಸುತ್ತಾರೆ. ಅವರನ್ನ ಪೊಲೀಸರಿಗೆ ಹಿಡಿದುಕೊಡಿ. ಈ ಕಾಲೇಜಿಗೆ ಬಂದಿದ್ದು, ಖುಷಿ ಆಗುತ್ತಿದೆ. ನನಗೆ 62 ವರ್ಷ. ಇಲ್ಲಿಗೆ ಬಂದು ಉಲ್ಟಾ ಆಗಿ 26 ಆಗಿದೆ ಎಂದು ಹೇಳಿದ್ದಾರೆ.








