ಬೆಂಗಳೂರು: ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ (Murder) ಇಂದಿರಾ ನಗರದ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ (Assam) ಮೂಲದ ಮಾಯಾ ಗೊಗಾಯ್ ಎನ್ನಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಇಂದಿರಾ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








