ಹೈದರಾಬಾದ್: ಪೂರಿ ತಿಂದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್ನ (Secunderabad)ಲ್ಲಿ ನಡೆದಿದೆ.
6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ. ಸಿಕಂದರಾಬಾದ್ ನ ತಿವೋಲಿ ಥಿಯೇಟರ್ ಹತ್ತಿರ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಊಟದ ವೇಳೆ ಮೂರು ಪೂರಿ ಒಟ್ಟಿಗೆ ತಿಂದ ಪರಿಣಾಮ ಬಾಲಕನಿಗೆ ಉಸಿರುಗಟ್ಟಿ ನೆಲಕ್ಕೆ ಕುಸಿದಿದ್ದಾನೆ. ಎಷ್ಟೇ ಎಚ್ಚರಗೊಳಿಸಿದರೂ ಪ್ರಜ್ಞೆ ಬಂದಿಲ್ಲ. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬಾಲಕ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.