ವಿಧಾನ ಪರಿಷತ್ ಸದಸ್ಯ ಎಚ್.ಎಲ್.ಭೋಜೆಗೌಡರಿಗೆ ಕೊರೊನಾ ಸೋಂಕು
ಬೆಂಗಳೂರು, ಜುಲೈ 8: ಜೆಡಿಎಸ್ ವಿಧಾನಪರಿಷತ್ ಸದಸ್ಯ ಎಚ್.ಎಲ್.ಭೋಜೆಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಮವಾರ ಅವರಲ್ಲಿ ಕೋವಿಡ್-19 ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅವರ ಪರೀಕ್ಷಾ ವರದಿ ಮಂಗಳವಾರ ಬಂದಿದ್ದು ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೋಜೆಗೌಡರನ್ನು ದಾಖಲಿಸಲಾಗಿದ್ದು, ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೋಜೇಗೌಡ ಅವರ ಕುಟುಂಬ ಕೂಡ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.
ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್
ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ....