ಬೆಂಗಳೂರು: ರಾಜ್ಯದಲ್ಲಿ ಕೂಡ ‘ಫೆಂಗಲ್’ ಚಂಡಮಾರುತದ ಹಾವಳಿ ಶುರುವಾಗಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಕೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಡಿ. 3ರಂದು ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಡಿ.1 ರಿಂದ 3ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








