ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ದಾಗ, ಬಿಜೆಪಿಯವರು ಎಲ್ಲಿ ಹೋಗಿದ್ರಿ? ನಿರ್ಮಲಾನಂದನಾಥ ಸ್ವಾಮೀಜಿಗಳ (Nirmalanandanatha Swamiji) ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ? ಈ ಅಶೋಕ್ ಆ ವೇಳೆ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.
ನಾವು ಎಲ್ಲ ಸ್ವಾಮೀಜಿಗಳಿಗೆ ಮನವಿ ಮಾಡುತ್ತಿದ್ದೇವೆ. ನೀವು ಯಾರ ಹಕ್ಕುಗಳ ಬಗ್ಗೆ ಮಾತನಾಡುವುದು ಬೇಡ, ಜಾತಿಗಳ ಬಗ್ಗೆ ಮಾತನಾಡುವುದು ಬೇಡ. ನಮ್ಮದು ಮಾನವ ಧರ್ಮ, ನಮ್ಮದು ಸಂವಿಧಾನ. ಎರಡಕ್ಕೂ ನಾವು ಹೆಚ್ಚಿಗೆ ಒತ್ತು ಕೊಟ್ಟು ಹೋಗಬೇಕು. ನಾನು ಸ್ವಾಮೀಜಿಗಳು ಹಾಗೂ ಪೊಲೀಸರಿಗೆ ಹೇಳುತ್ತೇನೆ, ಯಾರು ಕೂಡ ಕಾನೂನಿಗಿಂತ ದೊಡ್ಡವರಲ್ಲ. ಯಾರೇ ಮಾತನಾಡಿದರೂ ಕೇಸ್ ಹಾಕಲಾಗುತ್ತದೆ ಎಂದಿದ್ದಾರೆ.







