ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ (Indian American) ಅವರು ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಈಗಾಗಲೇ ಹಲವಾರು ಕ್ಷೇತ್ರಗಳಲ್ಲಿ ಬದಲಾವಣೆ ಮಡುತ್ತಿರುವ ಟ್ರಂಪ್, ಭಾರತೀಯ ಮೂಲದ ಕಶ್ಯಪ್ ಪಟೇಲ್ ಅವರನ್ನು ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ (FBI) ನಿರ್ದೇಶಕರನ್ನಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಟ್ರಂಪ್ ಸಂಪುಟಕ್ಕೆ ಆಯ್ಕೆಯಾದ ಭಾರತೀಯ ಮೂಲದ 2ನೇ ವ್ಯಕ್ತಿ ಎಂಬ ಹೆಗ್ಗಳಿಕೆ ಕಶ್ಯಪ್ ಪಾತ್ರರಾಗಿದ್ದಾರೆ.
ಈ ಕುರಿತು ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತೀಯ ಮೂಲದ ಅಮೆರಿಕನ್ ಪ್ರಜೆ ಕಶ್, ನಮ್ಮ ಅಟಾರ್ನಿ ಜನರಲ್ ಪಾಮ್ ಬೊಂಡಿ ಅವರ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ಎಫ್ಬಿಐಗೆ ಸಮಗ್ರತೆಯನ್ನು ತರಲಿದ್ದಾರೆ. ಕಶ್ ಪಟೇಲ್ ಅವರು ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ ನ ಮುಂದಿನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂಬುವುದು ಹೆಮ್ಮೆಯ ವಿಷಯ ಎಂದಿದ್ದಾರೆ.
ಕಶ್ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕದ ಹೋರಾಟಗಾರ. ಭ್ರಷ್ಟಾಚಾರವನ್ನು ಬಯಲಿಗೆಳೆಯಲು, ನ್ಯಾಯವನ್ನು ರಕ್ಷಿಸಲು ಹಾಗೂ ಅಮೆರಿಕದ ಜನರ ಪರವಾಗಿ ತಮ್ಮ ಜೀವನ ನಡೆಸಿ ಸುದೀರ್ಘ ಹೋರಾಟ ನಡೆಸಿದ್ದಾರೆ ಎಂದು ಪೋಸ್ಟ್ ಟ್ರಂಪ್ ಬರೆದುಕೊಂಡು ಹಾಡಿ ಹೊಗಳಿದ್ದಾರೆ.








