ಬಿ. ಶಿವಸ್ವಾಮಿ, ಕೆ.ಎ.ಎಸ್ (ಸೂಪರ್ ಟೈಂ ಸೈಲ್) ಅಧಿಕಾರಿ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಹಾಲು ಮಹಾಮಂಡಳಿ (KMF), ಬೆಂಗಳೂರು ಶ್ರೀ ಎಂ.ಕೆ ಜಗದೀಶ್ ಇವರ ಸ್ಥಾನಕ್ಕೆ ವರ್ಗಾಯಿಸಿ ಆದೇಶಿಸಲಾಗಿದೆ.
ಶ್ರೀ.ಕೆ ಜಗದೀಶ್ ಇವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಆಸು (ಸಚಿವಾಲಯ ಆಡಳಿತ) ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರವು ಅದಕ್ಕೆ ಸಂಬಂಧಿಸಿದ ಆದೇಶ ಹೊರಡಿಸಿದೆ.








