ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಕರ್ನಾಟಕದಲ್ಲಿ ರಣಕೇಕೆ ಮುಂದುವರೆಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಕರಾಳ ಹಸ್ತ ಚಾಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತಿ ಬಿ.ಎಸ್ ಯಡಿಯೂರಪ್ಪ ಅವರು ನಾಳೆ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಗರದ ಕೋವಿಡ್ ಕೇರ್ ಸೆಂಟರ್ಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ, ರೋಗಿಗಳಿಗೆ ಕಲ್ಪಿಸಿರುವ ವ್ಯವಸ್ಥೆ ಬಗ್ಗೆ ಖುದ್ದು ಪರಿಶೀಲನೆ ನಡೆಸಲಿದ್ದಾರೆ.
ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲೇ ಅತಿಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೋನಾ ಮಟ್ಟಹಾಕಲು ಬೆಂಗಳೂರನ್ನು ಸಂಪೂರ್ಣ ಲಾಕ್ಡೌನ್ ಮಾಡಿ ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಬೆಂಗಳೂರು ನಗರದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ಸರ್ಕಾರ, ಕೊರೋನಾ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಭಾರೀ ಸರ್ಕಸ್ ನಡೆಸುತ್ತಿದೆ.
ಈ ನಡುವೆ, ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೋನಾ ಸೋಂಕು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಡಾ ಸುದರ್ಶನ್ ಬಲ್ಲಾಳ್ ನೇತೃತ್ವದ ತಜ್ಞರ ತಂಡ ಅಭಿಪ್ರಾಯಪಟ್ಟಿದೆ. ಸರ್ಕಾರಕ್ಕೆ ಮುಂದಿನ ದಿನಗಳು ಸವಾಲಾಗಿ ಪರಿಣಮಿಸಲಿದೆ ಎಂದು ಹೇಳುತ್ತಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








