ಬೆಳಗಾವಿ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾವನ್ನಪ್ಪಿರುವ ಪ್ರಕರಣ ದೊಡ್ಡ ಮಟ್ಟದ ಸದ್ದ ಮಾಡಿತ್ತು. ಇದರ ಬೆನ್ನಲ್ಲೇ ಬೆಳಗಾವಿಯಲ್ಲೂ ಬಾಣಂತಿಯರು ಹಾಗೂ ಶಿಶು ಮರಣದ ಅಂಕಿ-ಸಂಖ್ಯೆ ಬೆಳಕಿಗೆ ಬಂದಿದ್ದು, ಬೆಚ್ಚಿ ಬೀಳಿಸುವ ಸಂಗತಿ ಹೊರ ಬಿದ್ದಿದೆ. ಹೀಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತನಿಖೆಗೆ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಬಾಣಂತಿಯರು, ಗರ್ಭಿಣಿಯರು, ಮಕ್ಕಳ ಸಾವು ಯಾವ ಕಾರಣಕ್ಕೆ ಆಗಿದೆ ಎಂದು ನೋಡುತ್ತಿದ್ದೇವೆ. ಐವಿ ಫ್ಲೂಯಿಡ್‌ನಿಂದ (IV Fluid) ಆಗಿರಬಹುದು ಎಂದು ಕಂಪನಿ ಬಗ್ಗೆ ಕೂಡ ವಿಚಾರಣೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಬರೀ ಪೌಷ್ಠಿಕಾಂಶದಿಂದ ಸಾವಾಗಿದೆ ಎಂದು ಹೇಳಲು ಆಗಲ್ಲ. ಬೇರೆ ಕಾರಣ ಇರಬಹುದು. ಒಂದು ವಾರದ ಗಡುವು ಕೊಟ್ಟು ತನಿಖೆ ನಡೆಸಿ ವರದಿ ಕೊಡುವಂತೆ ಹೇಳುತ್ತೇವೆ. ಬೆಳಗಾವಿಯಲ್ಲಿ ಸಾವಿನ ಕುರಿತು ಕೂಡ ವರದಿ ಕೊಡುವಂತೆ ಕೇಳುತ್ತೇನೆ ಎಂದಿದ್ದಾರೆ.








