ಬೆಳಗಾವಿ: ಕುಂದಾ ನಗರಿ ಬೆಳಗಾವಿ ರಾಜಕಾರಣದಲ್ಲಿ ಮತ್ತೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ಸದ್ದು ಮಾಡುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ – ರಮೇಶ್ ಜಾರಕಿಹೊಳಿ ಇಬ್ಬರೂ ಪರಸ್ಪರ ಆರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಇಂದೂ ಕೂಡ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ ಅಂದ್ರೆ ಅವರ ಮನೆ ದೇವರು ಹಟ್ಟಿ ವೀರಭದ್ರೇಶ್ವರ ಮೇಲೆ ಆಣೆ ಮಾಡಲಿ. ನಾನು ನಮ್ಮ ಮನೆ ದೇವರಾದ ಕೋಲ್ಹಾಪುರ ಮಹಾಲಕ್ಷ್ಮಿ ಮೇಲೆ ಆಣೆ ಮಾಡುತ್ತೇನೆ ಎಂದು ಸವಾಲು ಹಾಕಿದರು.








