ಬೆಂಗಳೂರು: ಮಾಸಿಕ ಗೌರವ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇದೇ ಶುಕ್ರವಾರ ಉಗ್ರ ಹೋರಾಟಕ್ಕೆ ಕರೆ ನೀಡಿರುವ ಆಶಾ ಕಾರ್ಯಕರ್ತೆಯರು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸಂಕಷ್ಟ ನಿವೇದಿಸಿಕೊಂಡ ಆಶಾ ಕಾರ್ಯಕರ್ತೆಯರು, ಕೊರೊನಾ ಸಂಕಷ್ಟದಲ್ಲೂ ಕಡಿಮೆ ವೇತನಕ್ಕೆ ದುಡಿಯುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಮುಂದಕ್ಕೆ ಹಾಕುತ್ತಲ್ಲೇ ಬಂದಿದೆ. ಹೀಗಾಗಿ ನಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಕೋರಿದರು.
ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿ.ಕೆ ಶಿವಕುಮಾರ್, ನಿಮಗೆ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.







