ಸರ್ಕಾರವು ಅಕ್ರಮ ಪಡಿತರ ಚೀಟಿದಾರರಿಗೆ ಅತಿ ದೊಡ್ಡ ಶಾಕ್ ನೀಡಿದೆ. ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದವರುಗಳ ವಿರುದ್ಧ ನ್ಯಾಯಾಲಯದ ಆದೇಶದಂತೆ ಕಾನೂನು ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಜನವರಿ 2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ₹13,51,30,858 ದಂಡ ವಿಧಿಸಲಾಗಿದೆ. ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ.
ಈ ವಿಚಾರದ ಬಗ್ಗೆ ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ