ಪಂಚಮಸಾಲಿ ಮೀಸಲಾತಿ ಹೋರಾಟ: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ಮತ್ತೆ ತೀವ್ರಗೊಂಡಿದೆ.
ಪ್ರತಿಭಟನೆಗೆ ಕರೆ: ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕೂಡಲಶ್ರೀ ಕರೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆ: ಹತ್ತರಗಿ ಮತ್ತು ಹಿರೇಬಾಗೇವಾಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ: ಕಾಂಗ್ರೆಸ್ ಸರ್ಕಾರ ಲಿಂಗಾಯತ ವಿರೋಧಿಯಾಗಿದ್ದು, ಮಂಗಳವಾರ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.