ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಸೇರಿದಂತೆ ಕೆಲವೆಡೆ ಭಾರೀ ಮಳೆಯಾಗುತ್ತಿದೆ. ಅಲ್ಲದೇ, ಇನ್ನೂ ಹಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಡಿ. 16 ರ ವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ, ರಾಜ್ಯದ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಡಿ. 13ರಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.








