ಚಿಕ್ಕಬಳ್ಳಾಪುರ: ಪ್ರತ್ಯೇಕ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ನಾಲ್ವರು ಖದೀಮರನ್ನು ವಶಕ್ಕೆ ಪಡೆದಿದ್ದಾರೆ.
ಬಾಗೇಪಲ್ಲಿ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆಂಧ್ರಪ್ರದೇಶದ ವೆಂಕಟೇಶ್ ಬಾಬು ಮತ್ತು ಸುರೇಶ್ ಎಂಬುವರನ್ನು ಬಂಧಿಸಿ 4 ಲಕ್ಷ ಮೌಲ್ಯದ 58 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸಂಬಂಧ ಪೊಲೀಸರು, ಆಂಧ್ರಪ್ರದೇಶದ ಸುಮಂತ್ ಮತ್ತು ಮಣಿಕಂಠ ಎಂಬುವರನ್ನು ಬಂಧಿಸಿ 10 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಬಾಗೇಪಲ್ಲಿ, ಯಶವಂತಪುರ, ಯಲಹಂಕ, ಕೊಪ್ಪಳ ಮತ್ತು ಮಂಚೇನಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಆರೋಪಿಗಳ ವಿರುದ್ಧ ದಾಖಲಾಗಿವೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.