ಸ್ಪೇನ್: ಆಸ್ಟ್ರೇಲಿಯಾ ಹಾಗೂ ಭಾರತದ ಮಧ್ಯೆ ನಡೆಯುತ್ತಿರುವ ಮೂರನೇ ಟೆಸ್ಟ್ ನಲ್ಲಿ ಬುಮ್ರಾ 5 ವಿಕೆಟ್ ಪಡೆದು ಮಿಂಚಿದ್ದಾರೆ.
ಮೂರನೇ ಟೆಸ್ಟ್ (3rd Test) ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ (Australia) ಹಿಡಿತ ಸಾಧಿಸಿದರೂ ಬುಮ್ರಾ (Jasprit Bumrah) 5 ವಿಕೆಟ್ ಗಳಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ತಂಡವು ಎರಡನೇ ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 405 ರನ್ ಗಳಿಸಿದೆ.
ಸ್ವೀವ್ ಸ್ಮಿತ್ 101 ರನ್ (190 ಎಸೆತ, 12 ಬೌಂಡರಿ), ಟ್ರಾವಿಸ್ ಹೆಡ್ 152 ರನ್( 160 ಎಸೆತ, 18 ಬೌಂಡರಿ) ಸಿಡಿಸಿದ್ದಾರೆ.
ದಿನದ ಅಂತ್ಯಕ್ಕೆ ಅಲೆಕ್ಸ್ ಕ್ಯಾರಿ 45 ರನ್, ಮಿಶೆಲ್ ಸ್ಟ್ರಾಕ್ 7 ರನ್ ಹೊಡೆದು ನಾಳೆ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 5 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಚಾಂಪಿಯನ್ ಶಿಪ್ ನಲ್ಲಿ (WTC) 5 ವಿಕೆಟ್ ಪಡೆದ ಆಸ್ಟ್ರೇಲಿಯಾ ಪ್ಯಾಟ್ ಕಮ್ಮಿನ್ಸ್ (Pat Cummins) ಅವರ ದಾಖಲೆ ಸರಿಗಟ್ಟಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಮತ್ತು ಬುಮ್ರಾ 9 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. ಕಗಿಸೋ ರಬಡಾ 7 ಬಾರಿ, ಆಸ್ಟ್ರೇಲಿಯಾದ ಜೋಶ್ ಹ್ಯಾಝಲ್‌ವುಡ್ ಮತ್ತು ನ್ಯೂಜಿಲೆಂಡ್‌ನ ಟಿಮ್ ಸೌಥಿ ತಲಾ 6 ಬಾರಿ 5 ವಿಕೆಟ್ ಪಡೆದು ಮಿಂಚಿದ್ದಾರೆ.








