ಮಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮತ್ತಷ್ಟು ತೀವ್ರಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಂದು 183 ಕೊರೊನಾ ಪಾಸಿಟಿವ್ ಬರುವ ಸಾಧ್ಯತೆ ಇದೆ.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಕೊರೊನಾ ಕೇಸ್ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊರೊನಾ ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕದಿಂದ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆ ನೋವಾಗಿ ಪರಿಣಮಿಸಿದೆ.
SARI ಮತ್ತು ILE ಪ್ರಕರಣಗಳಿಂದಲೂ ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿವೆ. ವಿದೇಶದಿಂದ ಬಂದ ಹಲವು ಪ್ರಯಾಣಿಕರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟಕ್ಕೆ ಕಾರಣವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ
ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...








