ನಟ ಉಪೇಂದ್ರ (Upendra) ನಟಿಸಿ, ನಿರ್ದೇಶಿಸಿರುವ ‘ಯುಐ’ (UI) ಸಿನಿಮಾ ಬಿಡುಗೆಡಯಾಗಿದ್ದು, ಪ್ರೇಕ್ಷಕರ ತಲೆಗೆ ಮತ್ತೊಮ್ಮೆ ಹುಳು ಬಿಟ್ಟಿದ್ದಾರೆ. ಈಗ ‘ಯುಐ’ ರಿಲೀಸ್ ಬಳಿಕ ಫ್ಯಾನ್ಸ್ ಮುಂದೆ ನಟ ಪ್ರಶ್ನೆ ಇಟ್ಟಿದ್ದಾರೆ. ಕೊನೆಯ ಶಾಟ್ ನ್ನು ಡಿಕೋಡ್ ಮಾಡಿ ಎಂದು ಸವಾಲು ಹಾಕಿದ್ದಾರೆ.
ಯುಐ ಚಿತ್ರದ ಎಷ್ಟು ಸೀನ್ ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎಂದು ಕಾತುರದಿಂದ ಕಾಯುತ್ತಿದ್ದೇನೆ ಎಂದು ನಟ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಯುಐ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ.
ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ಕೊಟ್ಟಿದ್ದಾರೆ. ಉಪೇಂದ್ರ ನಟನೆ, ನಿರ್ದೇಶನಕ್ಕೆ ಅಭಿಮಾನಿಗಳು ಪೂರ್ತಿ ಅಂಕ ನೀಡಿದ್ದಾರೆ.
2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ.








