ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿ.ಟಿ. ರವಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಕೂಡಲೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ಕೂಡಲೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದೆ. ಆದರೆ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ ಕೋರ್ಟ್ ಷರತ್ತು ವಿಧಿಸಿದೆ.








