ನವದೆಹಲಿ: ಏಪ್ರಿಲ್ ನಲ್ಲಿ ರಾಜ್ಯಸಭೆಯ 55 ಸ್ಥಾನಗಳು ಖಾಲಿಯಾಗಲಿದ್ದು, ಅವುಗಳ ಭರ್ತಿಗೆ ಮಾರ್ಚ್ 26ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ. ಹದಿನೇಳು ರಾಜ್ಯಗಳನ್ನು ಪ್ರತಿನಿಧಿಸುವ ಈ ಸ್ಥಾನಗಳು ಏಪ್ರಿಲ್ ನ ವಿವಿಧ ದಿನಾಂಕಗಳಲ್ಲಿ ಖಾಲಿ ಆಗಲಿವೆ. ಈ ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಮಾರ್ಚ್ 6ರಂದು ಪ್ರಕಟಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಮಾರ್ಚ್ 13 ಕೊನೇ ದಿನವಾಗಿ ಇರಲಿದೆ. ಅದೇ ರೀತಿ ಮತದಾನ ಮಾರ್ಚ್ 26ರಂದು ನಡೆಯಲಿದ್ದು ಅಂದೇ ಮತದಾನ ಮುಗಿದು ಒಂದು ಗಂಟೆಯ ನಂತರದಲ್ಲಿ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ರಾಜ್ಯಸಭೆಯಲ್ಲಿ ಅವಧಿಪೂರ್ಣ ಗೊಳಿಸಿ ನಿವೃತ್ತರಾಗುತ್ತಿರುವವರ ಪೈಕಿ ಎನ್ ಸಿಪಿ ನಾಯಕ ಶರದ್ ಪವಾರ್, ಕೇಂದ್ರ ಸಚಿವ ರಾಮದಾಸ್ ಅಠವಳೆ, ಕಾಂಗ್ರೆಸ್ ನ ಹಿರಿಯ ನೇತಾರ ಮೋತಿಲಾಲ್ ವೋರಾ, ಮಾಜಿ ಕೇಂದ್ರ ಸಚಿವ, ಬಿಜೆಪಿ ವಿಜಯ್ ಗೋಯೆಲ್ ಪ್ರಮುಖರಾಗಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, ಎಸ್ಐಆರ್ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್...







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
