ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 6 ಜನ ಸಾವನ್ನಪ್ಪಿದ್ದಾರೆ.
ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಲಾರಿ ಮುಗುಚಿ ಬಿದ್ದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಈ ಘಟನೆ ನೆಲಮಂಗಲ (Nelamangala) ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumkur Bengaluru National Highway) ಟಿ.ಬೇಗೂರು ಬಳಿ ಘಟನೆ ನಡೆದಿದೆ. ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ (ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)) ಸಾವನ್ನಪ್ಪಿದ್ದಾರೆ. ವೀಕೆಂಡ್ ಪ್ರವಾಸಕ್ಕೆಂದು ಕುಟುಂಬ ಸಮೇತ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತದ ಸಂದರ್ಭದಲ್ಲಿ ಕಂಟೇನರ್ ಕಾರಿನ ಮೇಲೆ ಬಿದ್ದ ಪರಿಣಾಮ, ಕಾರು ಸಂಪೂರ್ಣ ಅಪ್ಪಚ್ಚಿಯಾಗಿತ್ತು. ಇದರಿಂದ ಕಾರು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು. ಸ್ಥಳಕ್ಕೆ ನೆಲಮಂಗಲ ಪೊಲೀಸರು ಹಾಗೂ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








