ಬಳ್ಳಾರಿ: ಇಲ್ಲಿನ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರ ಕಳ್ಳತನ ನಡೆಯುತ್ತಿತ್ತು. ಈ ಕುರಿತು ಸ್ಥಳೀಯರು ದೂರು ನೀಡಿದ್ದರು. ಆದರೆ, ಕಳ್ಳ ಯಾರು ಎಂಬುವುದು ಗೊತ್ತಾಗುತ್ತಿದ್ದಂತೆ ಎಲ್ಲರೂ ಒಂದು ಕ್ಷಣ ಶಾಕ್ ಗೆ ಒಳಗಾಗಿದ್ದರು.
18 ವರ್ಷಗಳಿಂದ ಕೆಲಸಕ್ಕೆ ಇದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಪೇಟೆಯ ಸಾಯಿಸದನ ಅಪಾರ್ಟ್ಮೆಂಟ್ನಲ್ಲಿ (Apartment) ಕಳೆದ ಎರಡು ವರ್ಷಗಳಿಂದ ಕಳ್ಳತನಗಳು ನಡೆಯುತ್ತಿದ್ದವು. ಇದರಿಂದ ಬೇಸತ್ತ ನಿವಾಸಿಗರು ಹೊಸಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ ಅಪಾರ್ಟ್ ಮೆಂಟ್ ನಲ್ಲೇ ಇದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ 18 ವರ್ಷಗಳಿಂದ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದ. ಸದ್ಯ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದ್ದು, ಬಂಧಿತ ಪ್ರವೀಣ್ ನಿಂದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!
ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್ನಲ್ಲಿ ಹೆಸರಿರುವ...








