ಬೆಂಗಳೂರು: ಸಿ.ಟಿ. ರವಿ ಪ್ರಕರಣ ಸದನದ ಒಳಗೆ ನಡೆದಿತ್ತು. ಹೀಗಾಗಿ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಪೊಲೀಸರ ವಿರುದ್ಧ ಫುಲ್ ಗರಂ ಆಗಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪರಿಷತ್‌ನಲ್ಲಿ ನಿಂದನೆ ಆರೋಪ ಪ್ರಕರಣದಲ್ಲಿ ಮಹಿಳಾ ಆಯೋಗ ಎಂಟ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಹಿಳಾ ಆಯೋಗಕ್ಕೆ ಸಭಾಪತಿಗೆ ಕೇಳುವ ಅಧಿಕಾರ ಇಲ್ಲ. ಅವರು ಪತ್ರ ಬರೆಯಲಿ. ಅದಕ್ಕೆ ನಾನು ಉತ್ತರ ನೀಡಬೇಕಾಗಿಲ್ಲ. ಬೇಕಾದರೆ ಬೇರೆಯವರಿಗೆ ನೋಟಿಸ್ ನೀಡಲಿ ಎಂದಿದ್ದಾರೆ.
ಪ್ರಾಸ್ಟಿ** ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮಲ್ಲಿ ವಿಡಿಯೋ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು. ಇದ್ದರೆ ದೂರು ಕೊಡಲಿ ಎಫ್‌ಎಸ್‌ಎಲ್ ಗೆ ನೀಡುತ್ತೇವೆ ಎಂದಿದ್ದಾರೆ.
ಸಿ.ಟಿ ರವಿ (CT Ravi) – ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ನೀಡಿದ್ದೇನೆ. ಅನಿರ್ದಿಷ್ಟಾವಧಿ ವರೆಗೆ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಹೇಳಿದ್ದಾರೆ.
ಪೊಲೀಸರು ಮಹಜರು ಮಾಡುವ ಬಗ್ಗೆ ಕೇಳಿದರು. ಅದಕ್ಕೆ ನಾನು ಅನುಮತಿ ನೀಡಿಲ್ಲ. ಹೊರಗಿನ ವಿಚಾರಕ್ಕೆ ದೂರು ನೀಡಿದ್ದರೆ, ನಾವು ಹಸ್ತಕ್ಷೇಪ ಮಾಡಲ್ಲ. ಆದ್ರೆ ಆ ದಿನ ರಾತ್ರಿ 1 ಗಂಟೆ ತನಕವೂ ಸಿ.ಟಿ ರವಿ ಜೊತೆ ಸಂಪರ್ಕದಲ್ಲಿ ಇದ್ದೆ. ಪೊಲೀಸ್ ಆಯುಕ್ತರ ಜೊತೆಗೆ ಮಾತನಾಡಿ ಎಚ್ಚರಿಕೆ ನೀಡಿದ್ದೇನೆ. ಸಿ.ಟಿ. ರವಿ ಸೇಫ್ ಆಗಿದ್ದೇನೆ ಎಂದಾಗಲೇ ನಾನು ಮಲಗಿದ್ದೇನೆ ಎಂದಿದ್ದಾರೆ.