ನವದೆಹಲಿ: ವಿಮಾನ ಪತನಗೊಂಡ ಪರಿಣಾಮ 10 ಜನರು ಸಾವನ್ನಪ್ಪಿರುವ ಘಟನೆ ಬ್ರೆಜಿಲ್ ನಲ್ಲಿ ವರದಿಯಾಗಿದೆ.
ಅಲ್ಲದೇ, ಘಟನೆಯಲ್ಲಿ ಸುಮಾರು 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಮಾಹಿತಿಯಂತೆ, ವಿಮಾನದಲ್ಲಿದ್ದ 10 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರಾಗಿದ್ದು, ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದ ಮತ್ತೊಂದು ಪಟ್ಟಣದಿಂದ ಸಾವೊ ಪಾಲೊ ರಾಜ್ಯಕ್ಕೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.