ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ (ಖಲಿಸ್ತಾನ್ ಜಿಂದಾಬಾದ್ ಫೋರ್ಸ್) ಮೂವರು ಭಯೋತ್ಪಾದಕರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಈ ಎನ್ ಕೌಂಟರ್ (Encounter) ನಡೆದಿದೆ. ಎನ್ ಕೌಂಟರ್ ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು (Khalistani Terrorist) ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಹಾಗೂ ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎನ್ನಲಾಗಿದೆ.
ಹತರಾದ ಭಯೋತ್ಪಾದಕರು ಪಂಜಾಬ್ ನ ಗುರುದಾಸ್ ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎನ್ನಲಾಗಿದೆ. ಹಂತಕರನ್ನು ಬಲಿ ಪಡೆದ ಮೇಲೆ ಎರಡು ಎಕೆ -47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಪಿಲಿಭಿತ್ ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳಿರುವ ಕುರಿತು ಪಿಲಿಭಿತ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಾಚರಣೆ ಆರಂಭಿಸಿ, ಮೂವರನ್ನು ಬಲಿ ಪಡೆಯಲಾಗಿದೆ.