ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10m ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್ (Manu Bhaker) ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ ಎನ್ನಲಾಗಿದ್ದು, ಅವರ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ-ಅಥ್ಲೀಟ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಆದರೆ, ಮನು ಭಾಕರ್ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಅವರನ್ನು ಪರಿಗಣಿಸಿಲ್ಲ ಎಂದು ಕ್ರೀಡಾ ಇಲಾಖೆ ಹೇಳಿಲ್ಲ.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ವಿ.ರಾಮಸುಬ್ರಮಮ್ ನೇತೃತ್ವದ 12 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಲು ಸೂಚಿಸಲಾಗಿತ್ತು.
ಆದರೆ, ಈಗ ಸಮಿತಿಯ ನಿರ್ಧಾರಕ್ಕೆ ಮನು ಭಾಕರ್ ತಂದೆ ರಾಮಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಆದರೆ, ನಾನು ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದೇನೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪಿಸಿದ್ದಾರೆ