ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಗೆಳತಿಯಿಂದ ಸಂಕಷ್ಟ ಶುರುವಾಗಿದ್ದು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ನ್ನದ ವ್ಯಾಪಾರಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣದಲ್ಲಿ ವರ್ತೂರು ಪ್ರಕಾಶ್‌ಗೆ (Varthur Prakash) ಬಂಧನ ಭೀತಿ ಶುರುವಾಗಿದೆ. ಆರೋಪಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಫೋಟಕ ಹೇಳಿಕೆಗಳನ್ನ ನೀಡಿದ್ದಾರೆ. ತಾನು ವಂಚಿಸಿದ ಚಿನ್ನದಲ್ಲಿ ವರ್ತೂರು ಪ್ರಕಾಶ್‌ಗೂ ಪಾಲು ನೀಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಹೀಗಾಗಿ ವರ್ತೂರ್ ಪ್ರಕಾಶ್ ಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ವರ್ತೂರ್ ಇಂದು ವಿಚಾರಣೆ ಎದುರಿಸಿದ್ದಾರೆ.
ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‌ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಲ್ಲದೇ ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಬಹಿರಂಗವಾಗಿದೆ.
ವಿಚಾರಣೆ ಸಂದರ್ಭದಲ್ಲಿ ವರ್ತೂರ್ 12.5 ಲಕ್ಷ ರೂ. ನಗದು ಹಾಗೂ ಕೆಲವು ಚಿನ್ನಾಭರಣಗಳನ್ನು ಮರಳಿ ನೀಡಿದ್ದಾರೆ. ನನಗೂ ಅವಳಿಗೂ ಯಾವುದೇ ಸಂಬಂಧ ಇಲ್ಲ. ಅವಳು ಈ ರೀತಿ ಮಾಡುತ್ತಾಳೆ ಎಂಬುವುದು ಗೊತ್ತಿಲ್ಲ. ನನಗೆ ಅವಳು ಕೆಲವು ಒಡವೆ ನೀಡಿದ್ದಳು ಎಂದು ಹೇಳಿಕೆ ನೀಡಿದ್ದಾರೆ.