ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆ ತಡೆಯಲು ಸರ್ಕಾರವು ಚುನಾವಣಾ ನಿಯಮ ತಿರುಚಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
1961ರ ಚುನಾವಣಾ ನಿಯಮಗಳ ಇತ್ತೀಚಿನ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಚುನಾವಣಾ ಪ್ರಕ್ರಿಯೆಯ ಸಮಗ್ರತೆಯು ವೇಗವಾಗಿ ನಾಶವಾಗುತ್ತಿದೆ. ಅದನ್ನು ಮರುಸ್ಥಾಪಿಸಲು ಸುಪ್ರೀಂ ಕೋರ್ಟ್ ಸಹಾಯ ಮಾಡುತ್ತದೆ ಎಂದು ಭಾವಿಸುತ್ತೇವೆ” ಎಂದು ಜೈರಾಮ್ ರಮೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.
ಮತಗಟ್ಟೆಯೊಳಗೆ ಸಿಸಿಟಿವಿ ಕ್ಯಾಮೆರಾಗಳಿಗೆ ಅವಕಾಶ ನೀಡುವುದರಿಂದ ಮತದಾರರ ಗೌಪ್ಯತೆಯನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಈ ಕ್ರಮ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.








