ರಾಮನಗರ: ಚಿರತೆಯೊಂದು ಕಂಪೌಂಡ್ ಮೇಲೆ ಎಗರಿ ನಾಯಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಕನಕಪುರ (Kanakapura) ತಾಲೂಕಿನ ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರೇಗೌಡ ಎಂಬುವವರ ಮನೆಯ ಹತ್ತಿರ ಚಿರತೆ ಓಡಾಟ ನಡೆಸಿದ್ದು, ಸೋಮವಾರ ರಾತ್ರಿ ಮನೆಯ ಕಾಂಪೌಂಡ್ ಎಗರಿ ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಬೊಗಳುತ್ತಿದ್ದಂತೆ ಚಿರತೆ ಸ್ಥಳದಿಂದ ಓಡಿ ಹೋಗಿದೆ. ಚಿರತೆ ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡಿದ್ದಕ್ಕೆ ಜನರು ಬೆಚ್ಚಿ ಬಿದ್ದಿದ್ದು. ಕೂಡಲೇ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಎಫ್ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್ಐಆರ್ ದಾಖಲಾದರೂ...








