ಐಸಿಸಿಯು ಇಂದು 2025 ರ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಪಾಕಿಸ್ತಾನ್ ಆತಿಥ್ಯದಲ್ಲಿ ಟೂರ್ನಿ ನಡೆದರೂ ಭಾರತ ತಂಡದ ಪಂದ್ಯಗಳು ಮಾತ್ರ ದುಬೈನಲ್ಲಿ ನಡೆಯಲಿವೆ.
ಫೆಬ್ರವರಿ 19ರಿಂದ ಟೂರ್ನಿ ಆರಂಭವಾಗಲಿದ್ದು, ಮಾರ್ಚ್ 9 ರಂದು ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡ ಫೈನಲ್ ಪ್ರವೇಶಿಸಿದರೆ, ದುಬೈನಲ್ಲಿ ಫೈನಲ್ ಪಂದ್ಯ ನಡೆಯಲಿದೆ, ಇಲ್ಲದಿದ್ದರೆ ಪಾಕಿಸ್ತಾನ ಫೈನಲ್ಗೆ ಆತಿಥ್ಯ ವಹಿಸಲಿದೆ.
ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಪ್ರತಿಯೊಂದು ತಂಡವು ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಲಿವೆ.
ಫೆಬ್ರವರಿ 20 ರಿಂದ ಭಾರತ ತಂಡದ ಅಭಿಯಾನ ಆರಂಭವಾಗಲಿದೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಎರಡನೇ ಪಂದ್ಯವನ್ನು ಫೆ. 20ರಂದು ಪಾಕಿಸ್ತಾನದ ವಿರುದ್ಧ ಆಡಲಿದೆ. ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಮೂರನೇ ಪಂದ್ಯ ಆಡಲಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ನಾಲ್ಕು ಬಾರಿ ಫೈನಲ್ ತಲುಪಿದೆ. ಇದರಲ್ಲಿ ಎರಡು ಬಾರಿ ಫೈನಲ್ ಪಂದ್ಯದಲ್ಲಿ ಸೋಲು ಕಂಡಿದೆ.
ಚೊಚ್ಚಲ ಶತಕ ಸಿಡಿಸಿದ ಹರ್ಲೀನ್!!
6 ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಆರಂಭಿಸಿದ್ದ ಭಾರತೀಯ ಆಟಗಾರ್ತಿ ಹರ್ಲೀನ್ ಡಿಯೋಲ್ ಚೊಚ್ಚಲ ಶತಕ ಸಿಡಿಸಿ ಮಿಂಚಿದದಾರೆ. ಇಲ್ಲಿಯವರೆಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಲು ವಿಫಲರಾಗಿದ್ದ ಹರ್ಲೀನ್...