ಕಲಬುರಗಿ: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್ ಭಾಗಶಃ ಯಶಸ್ವಿಯಾಗಿದೆ.
ಜಿಲ್ಲೆಯಲ್ಲಿ ವಿವಿಧ ದಲಿತಪರ ಸಂಘಟನೆಗಳು ಕಲಬುರಗಿ ಬಂದ್ (Kalaburagi Bandh) ಬಂದ್ ಗೆ ಕರೆ ನೀಡಿದ್ದವು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನಾಕಾರರು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ವೇಳೆ, ಕೂಡಲೇ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ರಾಷ್ಟ್ರ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪಾತ್ರ ಬಹುಮುಖ್ಯವಾಗಿದೆ. ಭಾರತದ ಸಂವಿಧಾನ ರಚನೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯ. ನ್ಯಾಯ, ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಅವರ ಹೋರಾಟ ಭಾರತೀಯ ಇತಿಹಾಸದಲ್ಲಿ ಒಂದು ಮೈಲಿಗಲ್ಲಾಗಿದೆ. ಇಂತಹ ಮಹಾನ್ ವ್ಯಕ್ತಿಯ ಬಗ್ಗೆ ಕೀಳಾಗಿ ಮಾತನಾಡಿದ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಂಚೋಳಿ ಕ್ರಾಸ್ ಹತ್ತಿರ ಹಾಗೂ ಬೇಲೂರ್ ಕ್ರಾಸ್ ಹತ್ತಿರ ಲಾರಿಯ ಗಾಜನ್ನು ಉದ್ರಿಕ್ತರು ಒಡೆದಿದ್ದಾರೆ. ನಗರದಲ್ಲಿ ವಾಹನ ಸಂಚಾರ ಇರಲಿಲ್ಲ. ಹೀಗಾಗಿ ರಸ್ತೆಗಳೆಲ್ಲ ಬಿಕೋ ಎನ್ನುತ್ತಿದ್ದವು.
ನೀಟ್ ಕಿಚ್ಚು ಇಟಲಿಗೂ ತಲುಪಿತು- ಮೆಲೊನಿ ಇನ್‌ಸ್ಟಾದಲ್ಲಿ ಮೋದಿ ರಾಜೀನಾಮೆಗೆ ಪಟ್ಟು: ಡಿಜಿಟಲ್ ಲೋಕದ ವಿಭಿನ್ನ ಪ್ರತಿಭಟನೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಈಗ ದೇಶದ ಗಡಿ ದಾಟಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದ ವಿದ್ಯಾರ್ಥಿಗಳ ಆಕ್ರೋಶದ ಧ್ವನಿ ಈಗ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ...








