ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ (58) ಮತ್ತು ಸಂಜಯ್ ಸವದತ್ತಿ (18) ಕೊನೆಯುಸಿರೆಳೆದಿದ್ದಾರೆ. ಡಿಸೆಂಬರ್ 23 ರಂದು ಮಧ್ಯರಾತ್ರಿ 1:30ಕ್ಕೆ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ವೇಳೆ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗುತ್ತಿಗೆದಾರನ ಆತ್ಮಹತ್ಯೆಗೆ ಪ್ರಿಯಾಂಕ್ ಖರ್ಗೆ ಆಪ್ತ ಕಾರಣನಾ..? ಡೆತ್ ನೋಟ್ ನಲ್ಲಿ ಏನಿದೆ..?
2022ರಲ್ಲಿ ಕೆ.ಎಸ್. ಈಶ್ವರಪ್ಪಗೆ ರಾಜೀನಾಮೆಗೆ ಕಾರಣವಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಹೋಲುವಂತೆ ಕಲಬುರಗಿಯ 26 ವರ್ಷದ ಸಚಿನ್ ಎಂಬ ಗುತ್ತಿಗೆದಾರನ ಶವ ಕಲಬುರಗಿಯಲ್ಲಿ ರೈಲ್ವೆ...