ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರದ ಜಯನಗರ ನಿವಾಸಿಗಳಾದ ಚಂದ್ರಕಲಾ (40), ಲಕ್ಷ್ಮೀ (40) ಹಾಗೂ ರೇಖಾ (45) ಮೃತ ದುರ್ದೈವಿಗಳು. ಶಿಕಾರಿಪುರದ ಕೊಪ್ಪ ಕೆರೆಗೆ ಪೂಜೆ ಸಲ್ಲಿಸಲು ಟಾಟಾ ಏಸ್ ನಲ್ಲಿ ಜಯನಗರ ನಿವಾಸಿಗಳು ತೆರಳುತ್ತಿದ್ದರು. ಈ ವೇಳೆ ಕುಮದ್ವತಿ ಸೇತುವೆ ಬಳಿ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಘಟನಾ ಸ್ಥಳಕ್ಕೆ ಆಗಮಿಸಿದ ಶಿಕಾರಿಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








