ಬೆಳಗಾವಿ: ಎರಡು ದಿನಗಳ ಕಾಲ ನಡೆಯುತ್ತಿರುವ ಗಾಂಧಿ ಭಾರತ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶದ ಕಾಂಗ್ರೆಸ್ (Congress) ನಾಯಕರ ದಂಡೆ ಬೆಳಗಾವಿಗೆ ಆಗಮಿಸಿದೆ
ಸಿಎಂ ಸಿದ್ದರಾಮಯ್ಯ ಹಾಗೂ ಇಡೀ ಮಂತ್ರಿ ಮಂಡಲ ಮತ್ತು ಕಾಂಗ್ರೆಸ್ ನಾಯಕರು ಈಗಾಗಲೇ ಬೆಳಗಾವಿಯಲ್ಲಿ (Belagavi) ಬಿಡು ಬಿಟ್ಟಿದ್ದಾರೆ. ಈ ವೇಳೆ ನಾಯಕರನ್ನು ಶಾಲು ಹೊದಿಸುವ ಮೂಲಕ ಸ್ವಾಗತಿಸಲಾಯಿತು. ಕಾರ್ಯಕ್ರಮಕ್ಕೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಿಮಾಚಲ ಸಿಎಂ ಸುಖ್ವಿಂದ್ರ ಸಿಂಗ್ ಸುಖು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಶಶಿ ತರೂರ್, ಅಶೋಕ್ ಗೆಹ್ಲೋಟ್, ಸಚಿನ್ ಫೈಲಟ್, ವೇಣುಗೋಪಾಲ್, ಯುವ ಕಾಂಗ್ರೆಸ್ ಮುಖಂಡ ಕನ್ಹಯ್ಯ ಸೇರಿದಂತೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಸಚಿವರು, ಶಾಸಕರು ಮತ್ತು ಸಂಸತ್ತಿನ ಸದಸ್ಯರು ಆಗಮಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ ನವ ಸತ್ಯಾಗ್ರಹ ಸಭೆಗೂ ಮುನ್ನ ಧ್ವಜಾರೋಹಣ ನೆರವೇರಿಸಲಾಯಿತು. ಪಥಸಂಚಲನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗವಹಿಸಿದ್ದರು.