ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ರೋಡಿಯೋ ಜಾಕಿ ಹಾಗೂ ಸೋಷಿಯಲ್ ಮೀಡಿಯಾ ಸ್ಟಾರ್ (Social Media Star) ಸಿಮ್ರಾನ್ ಸಿಂಗ್ (25) ಶವವಾಗಿ ಪತ್ತೆಯಾಗಿದ್ದಾರೆ.
ಅವರು ಗುರುಗ್ರಾಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಪೊಲೀಸರು ಮಾತ್ರ ಇದು ಆತ್ಮಹತ್ಯೆ ಪ್ರಕರಣ ಎಂದು ಹೇಳಿದ್ದಾರೆ.
ಇನ್ ಸ್ಟಾಗ್ರಾಮ್ ನಲ್ಲಿ (Instagram) ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್, ಇದೇ ತಿಂಗಳ ಡಿಸೆಂಬರ್ 13ರಂದು ಕೊನೆಯದ್ದಾಗಿ ರೀಲ್ಸ್ ಮಾಡಿ, ಪೋಸ್ಟ್ ಮಾಡಿದ್ದರು. ಆನಂತರ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಸಿಮ್ರಾನ್ ಗುರುಗ್ರಾಮ್ ಸೆಕ್ಟರ್-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಈ ಪ್ರಕರಣ ಬೆಳಕಿಗೆ ಬ ದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...








