ಚಿಕ್ಕಬಳ್ಳಾಪುರ: ಬುರ್ಖಾ ಧರಿಸಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಪೊಲೀಸರು ಅರೆಸ್ಟ್ ಮಾಡಲು ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೊಲೀಸರು (Gauribidanur Police) ಆರೋಪಿಗಳನ್ನು ಬಂಧಿಸಿದ್ದಾರೆ. ಕಲಬುರಗಿ (Kalaburagi) ಮೂಲದ ರೇಖಾ ಬಾಯಿ, ಕರೀನಾ, ರೋಜಾ ಬಂಧಿತರಾಗಿದ್ದು ಪುಷ್ಪಾ ತಲೆಮರೆಸಿಕೊಂಡಿದ್ದಾಳೆ. ಈ ನಾಲ್ವರಲ್ಲಿ ಪುಷ್ಪಾ ಹಾಗೂ ರೇಖಾ ಅಕ್ಕ ತಂಗಿಯರಾಗಿದ್ದು, ರೋಜಾ ಹಾಗೂ ಕರೀನಾ ಸಹ ಸಹೋದರಿಯರಾಗಿದ್ದಾರೆ. ನಾಲ್ವರು ಒಂದೇ ಕುಟುಂಬದವರಾಗಿದ್ದು ಬಸ್ ನಿಲ್ದಾಣ. ಜನಸಂದಣಿ ಗಮನಿಸಿ ತಮ್ಮ ಕೈ ಚಳಕ ತೋರಿಸುತ್ತಿದ್ದರು.
ನ. 16 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಬಸ್ ನಿಲ್ದಾಣದಲ್ಲಿ ಶಾಂತಕುಮಾರಿ ಎಂಬಾಕೆ ಬೆಂಗಳೂರು ಬಸ್ ಹತ್ತುವ ಸಮಯದಲ್ಲಿ ಕತ್ತಿನಲ್ಲಿದ್ದ 50 ಗ್ರಾಂ ತೂಕದ 2 ಎಳೆ ಚಿನ್ನದ ಸರ ಕಳ್ಳತನ ಮಾಡಿದ್ದರು. ನಂತರ ಅದೇ ದಿನ ರತ್ನಮ್ಮ ಎಂಬ ಮಹಿಳೆಯ ಬ್ಯಾಗ್ ನಲ್ಲಿದ್ದ 1 ಲಕ್ಷ ರೂ. ಹಣ ಎಗರಿಸಿ ಎಸ್ಕೇಪ್ ಆಗಿದ್ದರು. ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸದ್ಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಗೌರಿಬಿನದೂರು ಬಸ್ ನಿಲ್ದಾಣದಲ್ಲಿ ಕಳೆದ 3 ದಿನಗಳ ಹಿಂದೆ ಮತ್ತೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.
ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಈ ಕಳ್ಳಿಯರು ರಾಜ್ಯದ ನಾನಾ ಕಡೆ ಕಳ್ಳತನ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...








