ಗ್ಲೋಬಲ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಈ ಮಧ್ಯೆ ದಾಖಲೆಗಳು ಮೂಡಿ ನಿಂತಿವೆ.
ಅಮೆರಿಕದ ನೆಲದಲ್ಲಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗ ಮಾಡದ ಸಾಧನೆಯನ್ನು ಈ ಚಿತ್ರ ತಂಡ ಮಾಡಿದೆ. ಚೆರ್ರಿ ಅಭಿಮಾನಿಗಳು ಕೂಡ ‘ಗೇಮ್ ಚೇಂಜರ್’ (Game Changer) ಸಿನಿಮಾ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾರೆ.
ಜ.10 ‘ಗೇಮ್ ಚೇಂಜರ್’ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಬೃಂದಾವನ ಕಾಲೋನಿಯ ವಜ್ರ ಗ್ರೌಂಡ್ಸ್ ನಲ್ಲಿ ರಾಮ್ಚರಣ್ 256 ಅಡಿ ಎತ್ತರದ ಕಟೌಟ್ ನಿಲ್ಲಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಭಾರತದ ಅತೀ ದೊಡ್ಡ ಕಟೌಟ್ ಎಂಬ ದಾಖಲೆಯನ್ನು ಇದು ಬರೆದಿದೆ.
RRR ನಂತರ ರಾಮ್ ಚರಣ್ ನಟಿಸಿರುವ ಯಾವ ಸಿನಿಮಾ ಕೂಡ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಮೆಗಾ ಫ್ಯಾನ್ಸ್ ‘ಗೇಮ್ ಚೇಂಜರ್’ ದರ್ಶನಕ್ಕೆ ಕಾಯುತ್ತಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಗೇಮ್ ಚೇಂಜರ್ ಗೆ ನಿರ್ದೇಶನ ಮಾಡಿದ್ದಾರೆ. ವೆಂಕಟೇಶ್ವರ ಕ್ರಿಯೇಷನ್ಸ್ ಮತ್ತು ಜೀ ಸ್ಟುಡಿಯೋಸ್ ಬ್ಯಾನರ್ನಲ್ಲಿ ದಿಲ್ ರಾಜು ಮತ್ತು ಸಿರಿಶ್ ನಿರ್ಮಿಸುತ್ತಿರುವ ಈ ಚಿತ್ರ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ನಲ್ಲಿ ರಾಮ್ ಚರಣ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ.








