ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಸಂಕಷ್ಟ ಶುರುವಾದಂತಾಗಿದೆ.
ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan) ವಿರುದ್ಧ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ಸರ್ಕಾರ ಮುಂದಾಗಿದೆ. ದರ್ಶನ್ ಜಾಮೀನು ರದ್ದು ಮಾಡಬೇಕೆಂದು ಆಗ್ರಹಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ (Karnataka Government) ಸೂಚಿಸಿದೆ. ಹೀಗಾಗಿ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ.
ಬೆಂಗಳೂರು ಪೊಲೀಸರ (Bengalruu Police) ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ರನ್ನು ನೇಮಿಸಲಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ (SLP) ಸಲ್ಲಿಕೆಯಾಗುವ ಸಾಧ್ಯತೆಯಿದೆ. ಪವಿತ್ರಗೌಡ, ದರ್ಶನ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








