ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 20ರ ಸುಮಾರಿಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. 
ಕಳೆದ ಮಾರ್ಚ್ 4ರಿಂದ 21ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕೊರೊನಾ ಸಾಂಕ್ರಾಮಿಕ ರೋಗದ ಕಾರಣ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಈ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿತ್ತು.








