ಬೆಂಗಳೂರು: ಕೊರೊನಾ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ಅವ್ಯವಹಾರ ಆರೋಪ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.
ಇದರ ನಡುವೆಯೇ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸರ್ಕಾರದ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾವಿವೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ನಾಳೆ ಸುದ್ದಿಗೋಷ್ಠಿ ಕರೆದಿರುವ ಸಿಎಂ ಯಡಿಯೂರಪ್ಪ, ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುವುದಾಗಿ ಹೇಳಿದ್ದಾರೆ.
ಕೊರೊನಾ ಅಟ್ಟಹಾಸ ತಡೆಯಲು ಲಾಕ್ಡೌನ್ ವೇಳೆ ಸಮರ್ಥವಾಗಿ ಪರಿಸ್ಥಿತಿ ನಿಭಾಯಿಸಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿದ್ದ 2200 ಕೋಟಿ ಅವ್ಯವಹಾರ ತಲೆ ನೋವಾಗಿ ಪರಿಣಮಿಸಿದೆ.
ಬಿಎಸ್ವೈ ಆಪ್ತರಲ್ಲಿ ಒಬ್ಬರಾಗಿರುವ ಮುರುಗೇಶ್ ನಿರಾಣಿ ಕೊರೊನಾ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬುದಾಗಿ ಹೇಳಿದ್ದಾರೆನ್ನಲಾದ ಆಡಿಯೂ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿರುವ ಮುರುಗೇಶ್ ನಿರಾಣಿ, ಅವ್ಯವಹಾರದ ದಾಖಲೆಗಳು ಪೆನ್ ಡ್ರೈವ್ನಲ್ಲಿವೆ ಎಂದಿರುವುದು ಸರ್ಕಾರದ ವಿರುದ್ಧ ಹೋರಾಡಲು ಪ್ರತಿಪಕ್ಷ ಕಾಂಗ್ರೆಸ್ಗೆ ವರದಾನವಾಗಿದೆ.
ಒಂದು ಕಡೆ ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು, ವೈದ್ಯರು ಹಾಗೂ ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಮಾಡಿರುವ ಅವ್ಯವಹಾರ ಆರೋಪ ಸೇರಿದಂತೆ ಎಲ್ಲಾ ಪ್ರಶ್ನೆಗಳಿಗೂ ನಾಳೆ ಉತ್ತರ ನೀಡುತ್ತೇನೆ ಎಂದು ಯಡಿಯೂರಪ್ಪ ಬೆಂಗಳೂರಿನಲ್ಲಿ ಇಂದು ಹೇಳಿಕೆ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪಂಚಮಸಾಲಿಗರ ಮೇಲೆ ಗೋಲಿಬಾರ್ ಗೆ ಸಂಚು
ದಾವಣಗೆರೆ: ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಗೋಲಿ ಬಾರ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ...