ನವದೆಹಲಿ: ದೇಶದಲ್ಲೇ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಕೂಡ ಸ್ಥಾನ ಪಡೆದಿದ್ದಾರೆ,.
ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ಸಂಸ್ಥೆ ನಡೆಸಿದ ಸರ್ವೇಯಲ್ಲಿ ಸಿದ್ದರಾಮಯ್ಯ ಅವರಿಗೆ ಮೂರನೇ ಸ್ಥಾನ ಸಿಕ್ಕಿದೆ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಂಬರ್ 1 ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ನಂಬರ್ 2 ಶ್ರೀಮಂತ ಸಿಎಂ ಗಳಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ 51 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.
ಇನ್ನುಳಿದಂತೆ ಆಂಧ್ರ ಸಿಎಂ 931 ಕೋಟಿ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (15 ಲಕ್ಷ), ಜಮ್ಮು-ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ (55 ಲಕ್ಷ), ಕೇರಳದ ಸಿಎಂ ಪಿಣರಾಯಿ ವಿಜಯನ್ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ಕ್ರಮವಾಗಿ ಕೊನೆಯ ಸ್ಥಾನದಲ್ಲಿದ್ದಾರೆ.
ಹೊಸಕೆರೆಹಳ್ಳಿ ಶೋಭಾ ಅಪಾರ್ಟ್ಮೆಂಟ್ ಗೂ ಡಿಕೆಶಿ ಕುಟುಂಬಕ್ಕೂ ಲಿಂಕ್ ಏನು? ಸಿದ್ದಗಂಗಾ ಮಠಕ್ಕೆ ಸಿಗದ ಎನ್ ಒ ಸಿ ಡಿಕೆಶಿ ಪರಿವಾರಕ್ಕೆ ಸುಲಭವಾಗಿ ಸಿಕ್ಕಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನೈಸ್ ಯೋಜನೆ ಮತ್ತು ಭೂ ಅಕ್ರಮದ ವಿಚಾರವಾಗಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಮರ ಈಗ...








