ರಾಮನಗರ: ಹೊಸ ವರ್ಷದ ಸಂಭ್ರಮಾಚರಣೆಗೆ (New Year 2025) ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿನ (Ramanagara) ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಕನಕಪುರ ತಾಲೂಕಿನ ಸಂಗಮ, ಮೇಕೆದಾಟು (Mekedatu) ಹಾಗೂ ಚುಂಚಿ ಫಾಲ್ಸ್‌ಗೆ (Chunchi Falls) ಸಾರ್ವಜನಿಕರು ಬರುವುದನ್ನು ನಿಷೇಧಿಸಲಾಗಿದೆ. ಡಿ.31ರಿಂದ ಜ.1ರ ಮಧ್ಯರಾತ್ರಿವರೆಗೂ ನಿರ್ಬಂಧ ಹೇರಿ ಕನಕಪುರ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.
ಕಾವೇರಿ ನದಿ ಪಾತ್ರ ಹಾಗೂ ಅರ್ಕಾವತಿ ನದಿ ಪಾತ್ರದಲ್ಲೂ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.








